ಕಡಬ: ಟ್ಯೂಷನ್ ಗೆಂದು ತೆರಳಿದ್ದ ಹತ್ತನೇ ತರಗತಿಯ ವಿದ್ಯಾರ್ಥಿ ನಾಪತ್ತೆ ➤ ಕುಮಾರಧಾರಾ ನದಿ ತಟದಲ್ಲಿ ಬ್ಯಾಗ್ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.30. ಟ್ಯೂಷನ್ ಗೆಂದು ತೆರಳಿದ್ದ ಹತ್ತನೇ ತರಗತಿಯ ಬಾಲಕನೋರ್ವ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಕಡಬದಿಂದ ವರದಿಯಾಗಿದೆ.

ಕಡಬದ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಅದ್ವೈತ್ ಎಂಬಾತ ಬುಧವಾರದಂದು ಟ್ಯೂಷನ್ ಗೆಂದು ತೆರಳಿ ಆ ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾನೆ. ಮನೆಯವರು ಹಾಗೂ ಸ್ಥಳೀಯರು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ನಾಕೂರು ಗಯ ಎಂಬಲ್ಲಿ ಕಂಡುಬಂದಿದ್ದು, ವಿಷಯ ತಿಳಿದು ಸಾರ್ವಜನಿಕರು ಜಮಾಯಿಸಿದ್ದಾರೆ. ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Also Read  ಕುದ್ಮಾರು: ಡಿ.ಸಿ.ಮನ್ನಾ ಭೂಮಿಯನ್ನು ಅರ್ಹರಿಗೆ ಹಂಚಲು ಪ್ರಸ್ತಾವನೆ ► 15 ದಿನಗಳೊಳಗೆ ಸಾರ್ವಜನಿಕ ಅಭಿಪ್ರಾಯ ಸಲ್ಲಿಸಲು ಅವಕಾಶ

 

error: Content is protected !!
Scroll to Top