ರಾಜ್ಯದಲ್ಲಿ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ.!! ➤ಹವಾಮಾನ ಇಲಾಖೆ ಮುನ್ಸೂಚನೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30 ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 4ರವರೆಗೆ ಮಳೆಯಾಗಲಿದೆ.

ಮೋಡ ಕವಿದ ವಾತಾವರಣದೊಂದಿಗೆ ಗಾಳಿಯ ಪ್ರಮಾಣ ಇರಲಿದೆ.ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

Also Read  ಕುಂದಾಪುರ: ತಡರಾತ್ರಿ ನಿದ್ದೆಗಣ್ಣಿನಲ್ಲಿ ಮನೆಯಿಂದ 3 ಕಿ.ಮೀ ನಡೆದ ಬಾಲಕಿ

 

 

error: Content is protected !!
Scroll to Top