ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ ➤ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30. ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಾಳೆಯಿಂದ ಪ್ರಾರಂಭವಾಗಲಿದ್ದು, ಏ.15ರವರೆಗೆ ನಡೆಯಲಿದೆ. ಈ ಬಾರಿಯ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.

ರಾಜ್ಯದಲ್ಲಿ ಈ ಸಲ ಒಟ್ಟು 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು ಪಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮ ತಡೆಯಲು ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಎಸ್.ಎಸ್.ಎಲ್‍ಸಿ. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ: 

Also Read  ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!     

ರಾಜ್ಯದಲ್ಲಿ ಮಾ.31ರಿಂದ (ನಾಳೆಯಿಂದ) ಎಸ್.ಎಸ್.ಎಲ್‍ಸಿ. ಪರೀಕ್ಷೆ ಆರಂಭಗೊಳ್ಳಲಿದೆ. ಈ ಹಿನ್ನಲೆ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಹೊರಡಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಇರುವ ಪೊಲೀಸ್ ಸಿಬ್ಬಂದಿ ನೇಮಕ ಮಾಡಲು ಶಿಕ್ಷಣ ಇಲಾಖೆ ಸೂಚಿಸಿದೆ.

error: Content is protected !!
Scroll to Top