(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30. ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ “ಕುರುಡು ಕಾಂಚಾಣ’ ಭರ್ಜರಿ ಸದ್ದು ಮಾಡುತ್ತಿದೆ. ಇದೂವರೆಗಿನ ಚುನಾವಣ ಅಕ್ರಮಗಳ ಮೊತ್ತ ಬರೋಬ್ಬರಿ 92 ಕೋಟಿ ರೂ. ಆಗಿದ್ದು ಬೆಚ್ಚಿ ಬೀಳಿಸುವಂತಿದೆ. ಇದು 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಶಪಡಿಸಿಕೊಂಡ ಮೊತ್ತಕ್ಕಿಂತ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ಕಣ್ಗಾವಲು, ಕ್ಷಿಪ್ರಗತಿ ಕ್ರಮ, ಎಚ್ಚರಿಕೆ ಹಾಗೂ ಜನರು ಸಕಾಲದಲ್ಲಿ ಮಾಹಿತಿಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಇಷ್ಟು ದೊಡ್ಡ ಮಟ್ಟದ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.