(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.30. ರಾಜಕಾರಣಿಗಳು ರಾಜಕಾರಣದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ದ್ವೇಷ ಭಾಷಣ ಕುರಿತು ಶಾಹೀನ್ ಅಬ್ದುಲ್ಲಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್, ಜಸ್ಟಿಸ್ ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠವು ಮಾಜಿ ಪ್ರಧಾನ ಮಂತ್ರಿಗಳಾದ ಜವಾಹರಲಾಲ್ ನೆಹರೂ, ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣಗಳನ್ನು ಕೇಳಲು ಜನರು ದೂರದ ಪ್ರದೇಶಗಳಿಂದ ಬರತುತ್ತಿದ್ದರು ಎಂದು ಉಲ್ಲೇಖಿಸಿದರು.