(ನ್ಯೂಸ್ ಕಡಬ)newskadaba.com ಮಂಗಳೂರು,ಮಾ.31 ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ಕಾರಣ ಜಿಲ್ಲೆಯಲ್ಲಿ ಮುಕ್ತ, ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು, ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಮಾಡುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅಧೀಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರು ಹಾಗೂ ಪೊಲೀಸ್ ಠಾಣೆಗಳಲ್ಲಿ ಶಸ್ತ್ರಾಸ್ತ್ರ ನಿಯಮ 2016 ನಿಯಮ-48 ರಲ್ಲಿ ತಿಳಿಸಿರುವಂತೆ ಪ್ರತೀ ಆಯುಧಗಳಿಗೆ ತಿಂಗಳಿಗೆ 200 ರೂ.ಗಳಂತೆ ಹಾಗೂ ಮದ್ದುಗುಂಡುಗಳಿಗೆ 100 ರೂ. ಗಳಂತೆ ಆಯುಧ ಪರವಾನಿಗೆದಾರರಿಂದ ಪಡೆದು ಸರ್ಕಾರಕ್ಕೆ ಜಮೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.