ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.31. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಪಡೆದು ಕಳೆದ ಆರು ವರ್ಷಗಳಿಂದ ತಲೆ ಮರೆಸಿ ಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ನೀಲೇಶ್ವರ ಪೊಲೀಸರು ಅಸ್ಸಾಂ ನಿಂದ ಬಂಧಿಸಿದ್ದಾರೆ. ಅಸ್ಸಾಂ ಮಿಲನ್ ಪುರದ ಶೇಖರ ಚೌಧರಿ(42) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಚಾಯೋತ್ ನ ಫ್ಲೈ ವುಡ್ ಕಂಪೆನಿಯಲ್ಲಿ ಕೆಲಸ ನಿರ್ವ ಹಿಸುತ್ತಿದ್ದ ಈತ ಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಈತನನ್ನು ಬಂಧಿಸಿದ್ದರು. ಕಣ್ಣೂರು ಸೆಂಟ್ರಲ್ ಜೈಲ್’ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಈತ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದನು ಎನ್ನಲಾಗಿದೆ.

Also Read  ಕನಕದಾಸರ ತತ್ವ ,ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ➤ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

 

error: Content is protected !!
Scroll to Top