ಮತ್ತೆ ಸದ್ದು ಮಾಡಿದ ಪಕ್ಷಾಂತರ ರಾಜಕೀಯ.!        ➤ ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌                    

(ನ್ಯೂಸ್ ಕಡಬ)Newskadaba.com ಬೆಂಳೂರು,ಮಾ.31  ಜೆಡಿಎಸ್‌ ಮಾಜಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ (ವಾಸು) ಸಹಿತ ಮಂಡ್ಯ, ಮೂಡಿಗೆರೆಯ ಹಲವು ಬಿಜೆಪಿ ಮುಖಂಡರು ಗುರುವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಸೇರಿದರು.

 

ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಶ್ರೀನಿವಾಸ ಅವರಿಗೆ ನಾನು ಬಹಳ ವರ್ಷಗಳಿಂದ ಗಾಳ ಹಾಕುತ್ತಿದ್ದೆ. ಆದರೆ ಅವರನ್ನು ಕರೆತರಲು ಸಾಧ್ಯವಾಗಿರಲಿಲ್ಲ. ಈಗ ಅವರು ಮತದಾರರ ಗಾಳಕ್ಕೆ ಬಿದ್ದಿದ್ದಾರೆ. ಅವರ ಸೇರ್ಪಡೆ ಕೇವಲ ತುಮಕೂರಿಗಲ್ಲ; ಇಡೀ ಹಳೆ ಮೈಸೂರಿಗೆ ದೊಡ್ಡ ಶಕ್ತಿ ಆಗಿದೆ ಎಂದು ಹೇಳಿದರು.

Also Read  ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ‌ ಕ್ಷಣಗಣನೆ

 

 

error: Content is protected !!
Scroll to Top