ಉಡುಪಿ: 55 ಕೇಂದ್ರಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ➤ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ

(ನ್ಯೂಸ್ ಕಡಬ)newskadaba.com  ಉಡುಪಿ, ಮಾ.31. ರಾಜ್ಯಾದ್ಯಂತ ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ ಆರಂಭಗೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ 13, 753 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ.

ಜಿಲ್ಲೆಯ 55 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಬೈಂದೂರಿನಲ್ಲಿ 8, ಕುಂದಾಪುರದಲ್ಲಿ 9, ಕಾರ್ಕಳದಲ್ಲಿ 10, ಬ್ರಹ್ಮಾವರದಲ್ಲಿ 12 ಹಾಗೂ ಉಡುಪಿಯಲ್ಲಿ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಇನ್ನು ಪರೀಕ್ಷೆ ಇಂದಿನಿಂದ ಎಪ್ರಿಲ್ 15ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಮಾಡಲಾಗಿದೆ.

Also Read  ಬಾವಿಗೆ ಬಿದ್ದು ಕಾಡುಕೋಣ ಮೃತ್ಯು - ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

 

 

error: Content is protected !!
Scroll to Top