ಚಲಿಸುತ್ತಿದ್ದ ಕಾರಿನಲ್ಲೇ ಯುವತಿ ಮೇಲೆ ಗ್ಯಾಂಗ್ ರೇಪ್.!!       

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮಾ.31 ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಕಾರಿನಲ್ಲೇ ಯುವತಿ ಮೇಲೆ ದುರುಳರು ಗ್ಯಾಂಗ್ ರೇಪ್ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯನ್ನು ಹೊತ್ತೊಯ್ದ ದುರುಳರು ನಂತರ ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸ್ನೇಹಿತನ ಜೊತೆ ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯ ಬಳಿ ಬಂದು ಗಲಾಟೆ ಮಾಡಿದ ದುರುಳರು ಸ್ನೇಹಿತನನ್ನು ಬೆದರಿಸಿ ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ. ನಂತರ ಕಾರ್ ನಲ್ಲಿ ಎಲ್ಲಾ ಅನೇಕಲ್, ನೈಸ್ ರಸ್ತೆ, ಇಂದಿರಾ ನಗರ ಸೇರಿದಂತೆ ಹಲವು ಕಡೆ ಸುತ್ತಾಟ ನಡೆಸಿ ಅತ್ಯಾಚಾರ ನಡೆಸಿ, ನಂತರ ಯುವತಿಯನ್ನು ಮನೆ ಬಳಿ ಬಿಟ್ಟು ಪರಾರಿಯಾಗಿದ್ದಾರೆ. ದುರುಳರ ಪೈಶಾಚಿಕ ಕೃತ್ಯಕ್ಕೆ ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ.ಪ್ರಕರಣ ದಾಖಲಿಸಿಕೊಂಡು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Also Read  ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ

 

 

 

error: Content is protected !!
Scroll to Top