ಕಡಬ ಬ್ಲಾಕ್ ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷರಾಗಿ ಶಶಿಧರ ಬೊಟ್ಟಡ್ಕ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ.09. ಕಡಬ ಬ್ಲಾಕ್ ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಮುಖಂಡ ಶಶಿಧರ ಬೊಟ್ಟಡ್ಕರನ್ನು ನೇಮಕ ಮಾಡಲಾಯಿತು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಪಂಗಡ ಘಟಕದ ಅಧ್ಯಕ್ಷ ಎಫ್.ಎಚ್ ಜಕ್ಕಪ್ಪರವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ಹರೀಶ್ ಕುಮರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈರವರ ನಿರ್ದೇಶನದಂತೆ ಕೆಪಿಸಿಸಿ ಸದಸ್ಯ ಡಾ| ರಘು ಹಾಗೂ ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್,  ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದಿವಾಕರ ಗೌಡ ಶಿರಾಡಿರವರ ಶಿಫಾರಸ್ಸಿನಂತೆ ಜಿಲ್ಲಾ ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷ ಶೇಖರ್ ಕುಕ್ಕೇಡಿರವರು ಆಯ್ಕೆ ಮಾಡಿದರು.

error: Content is protected !!

Join the Group

Join WhatsApp Group