(ನ್ಯೂಸ್ ಕಡಬ)Newskadaba.com ಮಾ.31 ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದು ಕರೆಸಿಕೊಳ್ಳುವ ಗದಗ ಜಿಲ್ಲೆಯ ಕಪ್ಪತಗುಡ್ಡಕ್ಕೆ ಬೇಸಿಗೆಯಲ್ಲಿ ಬೆಂಕಿಯ ಕಾಟ ಒಂದೆಡೆಯಾದರೆ, ಕಪ್ಪತಗುಡ್ಡದಲ್ಲಿ ನೀರಿನ ಮೂಲಗಳು ಬತ್ತಿ ಹೋಗಿದ್ದರಿಂದ ಇಲ್ಲಿ ವಾಸಿಸುವ ಪ್ರಾಣಿ ಪಕ್ಷಿಗಳಿಗೆ ಕುಡಿಯಲು ನೀರು ಇಲ್ಲದೆ ಪರಿತಪಿಸುತ್ತಿರುವುದು ವಿಷಾದವಾಗಿದೆ.
ಆದರೆ, ಕಳೆದ ಅನೇಕ ವರ್ಷಗಳಿಂದ ಕಪ್ಪತಹಿಲ್ಸ್ ಅರಣ್ಯ ಇಲಾಖೆ ಕೃತಕ ಹೊಂಡಗಳನ್ನು ನಿರ್ಮಿಸಿ ಪ್ರಾಣಿ-ಪಕ್ಷಿಗಳಿಗೆ ಕುಡಿಯಲು ನೀರು ಒದಗಿಸುತ್ತಿರುವುದು ಮಾನವೀಯ ಮೌಲ್ಯಕ್ಕೆ ಸಾಕ್ಷಿಯಾಗಿದೆ.