(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ವಿಧಾನಸಭೆ ಚುಣಾವಣೆ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಈ ನಿಟ್ಟಿನಲ್ಲಿ ಕೆಲ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ತಿಳಿಸಿದೆ.
ಮಾ.29ರಿಂದ ಮೇ 15ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ. ಮಾದರಿ ನೀತಿಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ವಿಧಾನಸಭಾ ಕ್ಷೇತ್ರವಾರು ವಿವಿಧ ತಂಡಗಳನ್ನು ರಚಿಸಲಾಗಿದೆ.