ಚೆಕ್‌ ಬೌನ್ಸ್‌ ಪ್ರಕರಣ ➤ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಬಂಧನಕ್ಕೆ ಜಾಮೀನುರಹಿತ ವಾರಂಟ್

(ನ್ಯೂಸ್ ಕಡಬ) newskadaba.com. ಚಿಕ್ಕಮಗಳೂರು, ಮಾ.31. ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯವು ಇವರ ಬಂಧನಕ್ಕೆ ಜಾಮೀನುರಹಿತ ವಾರಂಟ್‌ ಹೊರಡಿಸಿದೆ.

ಚೆಕ್‌ ಬೌನ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಎಂ.ಪಿ.ಕುಮಾರಸ್ವಾಮಿ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿತ್ತಾದರೂ ಕುಮಾರಸ್ವಾಮಿ ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ಮಾ.28 ರಂದು ಕೋರ್ಟ್‌ ಜಾಮೀನುರಹಿತ ವಾರಂಟ್‌ ಹೊರಡಿಸಿದೆ. ಕುಮಾರಸ್ವಾಮಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಚಿಕ್ಕಮಗಳೂರು ಎಸ್​ ಪಿಗೆ ಸೂಚನೆ ನೀಡಲಾಗಿದೆ.

error: Content is protected !!
Scroll to Top