ಇಬ್ಬರು ಯುವಕರ ಮೇಲೆ ಚಾಕು ಇರಿತ..!!   ➤ ದೂರು ದಾಖಲು

(ನ್ಯೂಸ್ ಕಡಬ)Newskadaba.com ಹಾಸನ, ಮಾ.31 ಇಬ್ಬರು ಯುವಕರಿಗೆ ಚಾಕು ಇರಿದ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.ಮುರುಳಿ ಹಾಗೂ ಹರ್ಷ ಚಾಕು ಇರಿತಕ್ಕೊಳಗಾದವರು.ರಾಮನವಮಿ ಅಂಗವಾಗಿ ನಗರದ ಜಾಮೀಯಾ ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗುತ್ತಿದ್ದ ವೇಳೆ ಸಂಘಪರಿವಾರದ ಕಾರ್ಯಕರ್ತರು ದಾಂಧಲೆವೆಬ್ಬಿಸಿದ್ದಾರೆ. ಈ ವೇಳೆ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ.

ರಾಮನವಮಿ ಅಂಗವಾಗಿ ನಗರದ ಜಾಮೀಯಾ ಮಸೀದಿ ರಸ್ತೆಯಲ್ಲಿ ರಾತ್ರೀ ಮೆರವಣಿಗೆ ಹೋಗುತ್ತಿದ್ದ ವೇಳೆ ಎರಡು ಕೋಮಿನ ಯುವಕರ ನಡುವೆ ಜಗಳ ಶುರುವಾಗಿದೆ. ಇದು ತಾರಕಕ್ಕೇರಿ ಮುರುಳಿ ಹಾಗೂ ಹರ್ಷ ಎಂಬ ಯುವಕರ ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಗಾಯಗೊಂಡ ಯುವಕರನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Also Read  ಎಸ್‌ಪಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ರಚಿಸಿ ವಂಚನೆ – ಆರೋಪಿ ಅರೆಸ್ಟ್

 

 

 

error: Content is protected !!
Scroll to Top