ಕೌಟುಂಬಿಕ ಕಲಹಕ್ಕೆ ಮನನೊಂದು ದಂಪತಿ ಆತ್ಮಹತ್ಯೆ..!!

(ನ್ಯೂಸ್ ಕಡಬ)Newskadaba.com ಮಂಡ್ಯ,ಮಾ.31 ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ದಂಪತಿ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ  ಈ ಘಟನೆ ನಡೆದಿದೆ.ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ವಿಷಯ ತಿಳಿದು ಮನೆಗೆ ಬಂದ ಪತಿ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಕೊರಳೊಡ್ಡಿದ್ದಾರೆ. ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಮೃತ ದಂಪತಿಗೆ 7 ಹಾಗೂ 5 ವರ್ಷದ ಮಕ್ಕಳಿದ್ದರು. ತಂದೆ-ತಾಯಿ ಆತ್ಮಹತ್ಯೆಯಿಂದ ಮಕ್ಕಳಿಬ್ಬರು ಅನಾಥರಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Also Read  ಕೃಷಿ ಹೊಂಡದಲ್ಲಿ ಈಜಲು ಮೃತಪಟ್ಟ ಯುವತಿ

 

 

 

 

 

error: Content is protected !!
Scroll to Top