FDA, SDA, ಸೇರಿ 757 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ KEA !

(ನ್ಯೂಸ್ ಕಡಬ)newskadaba.com ಮಾ.31. ರಾಜ್ಯ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿದ್ದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎನ್ನಲಾಗಿದೆ. ಕರ್ನಾಟಕ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಾ ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಭ ಸುದ್ದಿ ನೀಡಿದೆ.


ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಲವು ಸ್ತರದ ಹುದ್ದೆಗಳ ಭರ್ತಿಗೆ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಯಮ ನಿಯಮಿತ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವಾಲಯ ಹಾಗೂ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ನಲ್ಲಿ ಖಾಲಿ ಇರುವ ಒಟ್ಟು 757 ಹುದ್ದೆಗಳ ಭರ್ತಿ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.

Also Read  ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ  ತಜ್ಞರೊಂದಿಗೆ ಸರ್ಕಾರ ಸಭೆ, ಚರ್ಚೆ….!

error: Content is protected !!
Scroll to Top