(ನ್ಯೂಸ್ ಕಡಬ) newskadaba.com.ಮೈಸೂರು, ಮಾ. 31. ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಮೈಸೂರಲ್ಲಿ ಪೊಲೀಸ್ ಇಲಾಖೆ ಕಾರ್ಯ ಪ್ರವೃತ್ತವಾಗಿದ್ದು, ಚುನಾವಣೆ ವೇಳೆ ಐಪಿಎಲ್ ಬೆಟ್ಟಿಂಗ್ ದಾರರಿಗೂ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮೈಸೂರಿನ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಾದ್ಯಂತ ಎಂಟು ಚೆಕ್ ಪೋಸ್ಟ್ ಗಳಿದ್ದು, ಈ ಪೈಕಿ ನಗರ ವ್ಯಾಪ್ತಿಯಲ್ಲಿ ಮೂರು ಚೆಕ್ ಪೋಸ್ಟ್ ಗಳು ಬರುತ್ತವೆ. ಈಗಾಗಲೇ ಐವರು ರೌಡಿಶೀಟರ್ ಗಳನ್ನು ಗಡಿಪಾರು ಮಾಡಲಾಗಿದೆ. ಉಳಿದವರಿಗೆ ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ ಎಂದರು.