ವಿವಾಹಿತ ಮಹಿಳೆ ಅನುಮಾನಸ್ಪಾದ ಸಾವು ➤ ಕೊಲೆ ಶಂಕೆ..!

Crime

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಸುಬ್ರಮಣ್ಯಪುರದ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮಂಡ್ಯ ಮೂಲದ ರಶ್ಮಿ (32) ಮೃತಪಟ್ಟವರು ಎಂದು ಗುರುತಿಸಲಾಗಿದೆ.


ಪತಿಯೇ ಕೊಲೆಗೈದು ನೇಣು ಹಾಕಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ ಎನ್ನಲಾಗಿದ್ದು, ರಶ್ಮಿ ಅವರು ಕಳೆದ 10 ವರ್ಷಗಳ ಹಿಂದೆ ಶ್ರೀರಂಗಪಟ್ಟಣ ಮೂಲದ ಅರವಿಂದ್ ಎಂಬಾತನೊಂದಿಗೆ ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಗಂಡು ಮಗು ಇದೆ. ಸ್ಥಳಕ್ಕೆ ಭೇಟಿ ನೀಡಿರುವ ಸುಬ್ರಮಣ್ಯಪುರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

Scroll to Top