ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಶಿಕ್ಷಕ ➤ ಅಮಾನತು ಆದೇಶ

(ನ್ಯೂಸ್ ಕಡಬ)newskadaba.com ವಿಜಯಪುರ, ಏ.01.  ಚುನಾವಣಾ ಕರ್ತವ್ಯದಲ್ಲಿ ಲೋಪವೆಸಗಿದ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ ಎನ್ನಲಾಗಿದೆ.

ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರುಗಳಾದ ಅಪ್ಪಣ್ಣ ಸವದಿ ಹಾಗೂ ಕಳ್ಳಕವಟಗಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಅಲ್ಲಾಬಕ್ಷ ಇವರನ್ನು ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದದ್ದಕ್ಕೆ ಸೇವೆಯಿಂದ ಅಮಾನತು ಮಾಡಿ ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ನೀಡಿದ್ದಾರೆ.

Also Read  ಸರ್ಕಾರಿ ಆಸ್ಪತ್ರೆಗಳ ಡಾಕ್ಟರ್, ನರ್ಸ್​ಗಳಿಗೆ ಬಂಪರ್ ಗಿಫ್ಟ್​ ➤ ಕರ್ನಾಟಕ ಸರ್ಕಾರದಿಂದ ವೇತನ ಹೆಚ್ಚಳ

 

error: Content is protected !!
Scroll to Top