ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ➤ ನವ ದಂಪತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಳಗಾವಿ, ಏ.03. ಕಾರು ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ದಂಪತಿ ಮೃತಪಟ್ಟ ಘಟನೆ ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದ ನಿಪ್ಪಾಣಿ- ಮುದೋಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಕಳೆದ 10 ದಿನಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಇಂದ್ರಜಿತ್​ ಮೋಹನ್ ಡಮ್ಮಣಗಿ(27) ಹಾಗೂ ಕಲ್ಯಾಣಿ ಇಂದ್ರಜಿತ್ ಡಮ್ಮಣಗಿ(24) ಮೃತರು ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಮೂಲದ ದಂಪತಿ ಬಾಗಲಕೋಟೆ ಜಿಲ್ಲೆಯ ಸುಪ್ರಸಿದ್ಧ ಬಾದಾಮಿ ಬನಶಂಕರಿ ದೇವಿ ದರ್ಶನ ಪಡೆದು ಮರಳಿ‌ ಮನೆಗೆ ತೆರಳುವಾಗ ಕಾರು ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ ನಡೆದಿದೆ.

Also Read  ಐಐಎಫ್ಎ- 2024: ಶಾರುಕ್ ಖಾನ್ ಗೆ ಅತ್ಯುತ್ತಮ ನಟ ಪ್ರಶಸ್ತಿ- ʼಅನಿಮಲ್ʼ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ

 

error: Content is protected !!
Scroll to Top