ಈಶ್ವರಪ್ಪ ಹುಚ್ಚನ ಹಾಗೆ ಮಾತನಾಡುವುದನ್ನು ನಿಲ್ಲಿಸಲಿ ► ಕಾಗೋಡು ತಿಮ್ಮಪ್ಪರಿಂದ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.09, ಸಿಎಂ ಸಿದ್ದರಾಮಯ್ಯನವರ ವಿರುದ್ಧ ‘ಹುಚ್ಚನ ಕೈಯಲ್ಲಿ ಆಡಳಿತ ಕೊಟ್ಟಂತಾಗಿದೆ’ ಎಂದು ಟೀಕಾಪ್ರಹಾರ ನಡೆಸಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಇದೀಗ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ವಾಗ್ದಾಳಿ ನಡೆಸಿದ್ದಾರೆ.

ಅವರು ಮಂಗಳವಾರದಂದು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಕೆ.ಎಸ್.ಈಶ್ವರಪ್ಪರವರು ಮೊದಲು ಹುಚ್ಚನಂತೆ ಮಾತನಾಡುವುದನ್ನು ನಿಲ್ಲಿಸಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಅವರು ಪರಿಸ್ಥಿತಿಯ ಇತಿಮಿತಿಯನ್ನು ಅರಿತು ಮಾತನಾಡಬೇಕು’ ಎಂದು ಕಾಗೋಡು ತಿಮ್ಮಪ್ಪ ಈಶ್ವರಪ್ಪನವರ ವಿರುದ್ಧ ಕಿಡಿಕಾರಿದ್ದಾರೆ.

Also Read  ಪಿಕಪ್ ವ್ಯಾನ್‌‌ ನಲ್ಲಿ ಒಂದು ಕ್ವಿಂಟಾಲ್ ಗಾಂಜಾ ಸಾಗಾಟ - ಇಬ್ಬರ ಬಂಧನ

error: Content is protected !!
Scroll to Top