ಮನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ..! ➤ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕೊಣಾಜೆ, ಏ.04. ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಕೊಣಾಜೆ ಎಂಬಲ್ಲಿ ಸಂಭವಿಸಿದೆ.


ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್’ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಪ್ರಾಣ ಹಾನಿಯಾಗಿಲ್ಲ, ಆದರೆ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಮನೆಯ ಪೀಠೋಪಕರಣಗಳು, ಪಾತ್ರೆಗಳು, ವಿದ್ಯುತ್ ಉಪಕರಣಗಳು, ಗೃಹ ಉಪಯೋಗಿ ಪರಿಕರಗಳು, ಮಕ್ಕಳ ಶಾಲಾ ಪಠ್ಯ ಪುಸ್ತಕ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮಗೊಂಡಿದೆ ಎನ್ನಲಾಗಿದೆ.

Also Read  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..???

error: Content is protected !!
Scroll to Top