ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಟ್ಲ, ಏ.04. ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಎಂಬಲ್ಲಿ ನಡೆದಿದೆ. ಯಮುನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಈ ಬಗ್ಗೆ ಅವರ ಪುತ್ರ ಉಮೇಶ್ ಪೂಜಾರಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ತನ್ನ ತಾಯಿಗೆ ಸಕ್ಕರೆ ಕಾಯಿಲೆ, ರಕ್ತದ ಒತ್ತಡವಿದ್ದು, ಔಷಧ ತೆಗೆದುಕೊಂಡರೂ ಗುಣವಾಗದ ಹಿನ್ನಲೆಯಲ್ಲಿ ಜಿಗುಪ್ಸೆಗೊಂಡು ಮನೆಯ ಊಟದ ಕೋಣೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

 

Scroll to Top