ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ) newskadaba.com ಗುಂಡ್ಯ, ಏ. 04. ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.


ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(50) ಎಂದು ಗುರುತಿಸಲಾಗಿದೆ. ಇವರು ಕಳೆದ 15 ವರ್ಷದಿಂದ ಗುಂಡ್ಯ ಪರಿಸರದಲ್ಲಿ ಒಬ್ಬಂಟಿಯಾಗಿ ಜೀವಿಸುತ್ತಾ, ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು ರಸ್ತೆಯ ಬದಿಯಲ್ಲಿ ಮಲಗುತ್ತಿದ್ದರು ಎನ್ನಲಾಗಿದೆ.

Also Read  ಕರಾವಳಿ ಪ್ರದೇಶದಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

error: Content is protected !!
Scroll to Top