ಅವಧಿಗೂ ಮುನ್ನವೇ ಉತ್ತರ ಪತ್ರಿಕೆ ಕಿತ್ತುಕೊಂಡ ಮೇಲ್ವಿಚಾರಕ  ➤ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ ವಿದ್ಯಾರ್ಥಿನಿ.!!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಏ. 04. ವಿದ್ಯಾರ್ಥಿನಿಯೋರ್ವಳು ಗಣಿತ ಪರೀಕ್ಷೆ ಬರೆಯುತ್ತಿದ್ದಾಗ ಕೊಠಡಿಯ ಮೇಲ್ವಿಚಾರಕರೊಬ್ಬರು ನಿಗದಿತ ಅವಧಿಗೂ ಮುನ್ನವೇ ಉತ್ತರ ಪತ್ರಿಕೆ ಪಡೆದುಕೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಪರೀಕ್ಷೆ ಬರೆಯಲು 1.45 ರ ವರೆಗೆ ಸಮಯ ನಿಗದಿಯಾಗಿತ್ತು. ಆದರೆ ಕೊಠಡಿ ಸಂಖ್ಯೆ 13ರ ಮೇಲ್ವಿಚಾರಕರು ಎಲ್ಲ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು 1.30ಕ್ಕೆ ಕಸಿದುಕೊಂಡಿದ್ದಾರೆ ಎಂದು ಖಾಸಗಿ ಪ್ರೌಢಶಾಲೆ ವಿದ್ಯಾರ್ಥಿನಿಯೊಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

 

 

 

error: Content is protected !!
Scroll to Top