ಬಂಟ್ವಾಳ: ಶಂಕಿತ ರೇಬಿಸ್ ಗೆ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಏ. 04. ಶಂಕಿತ ರೇಬಿಸ್‌ ಗೆ ಯುವಕನೋರ್ವ ಬಲಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಮೃತ ಯುವಕನನ್ನು ಅಶೋಕ ಹೆಗ್ಡೆ ಎಂಬವರ ಪುತ್ರ ಪ್ರಶಾಂತ ಹೆಗ್ಡೆ(31) ಎಂದು ಗುರುತಿಸಲಾಗಿದೆ. ಈತನಿಗೆ ಮೂರು ತಿಂಗಳ ಹಿಂದೆ ಅವರ ಮನೆಯ ಸಾಕು ನಾಯಿ ಕಚ್ಚಿದ್ದು, ಬಳಿಕ ನಾಯಿ ಮೃತಪಟ್ಟಿತ್ತು. ಆದರೆ ಪ್ರಶಾಂತ್ ಅವರು ನಾಯಿ ಕಚ್ಚಿರುವುದಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಬಳಿಕ ತೀವ್ರ ಜ್ವರದಿಂದ ಬಳಲುತ್ತಿದ್ದ ಈತ, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ತೆರಳಿದಾಗ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಶಾಂತ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಲೋಕಸಭೆಯಲ್ಲಿ ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದ ➤ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್

 

error: Content is protected !!
Scroll to Top