ರಾಹುಲ್ ಗಾಂಧಿಯ ಜಾಮೀನು ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com  ನವದೆಹಲಿ, ಏ.04. ‘ಮೋದಿ ಉಪನಾಮ’ ಹೇಳಿಕೆ ಕುರಿತ ಮಾನ ನಷ್ಟ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಸೂರತ್ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ ಎಂದು ವರದಿ ತಿಳಿಸಿದೆ.

ಮಾನಹಾನಿ ಪ್ರಕರಣದಲ್ಲಿ ತನಗೆ ವಿಧಿಸಲಾಗಿರುವ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ರಾಹುಲ್ ಗಾಂಧಿ ಸೂರತ್ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Also Read  ಕೋಮುಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು

ರಾಹುಲ್ ಗಾಂಧಿ ಅವರೊಂದಿಗೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ, ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳು ಮತ್ತು ಇತರ ಕಾಂಗ್ರೆಸ್ ಮುಖಂಡರು ನ್ಯಾಯಾಲಯಕ್ಕೆ ಆಗಮಿಸಿದ್ದರು.

 

 

error: Content is protected !!
Scroll to Top