ಜಾನುವಾರು ವ್ಯಾಪಾರಿಯನ್ನು ಹತ್ಯೆ ಗೈದ ಪುನೀತ್ ಕೆರೆಹಳ್ಳಿ..!!     ➤ ಪೋಲೀಸರಿಂದ ಆರೋಪಿಯ ಹುಡುಕಾಟ

(ನ್ಯೂಸ್ ಕಡಬ)Newskadaba.com ನಕಪುರದ,ಏ.04 ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಜಾನುವಾರು ಸಾಗಟ ವಾಹನದ ಸಹಾಯಕ ಚಾಲಕ ಇದ್ರೀಸ್ ಪಾಷಾ (39) ಎಂಬಾತನನ್ನು ಹತ್ಯೆಗೈದ ಆರೋಪ ಹೊತ್ತಿರುವ ಬಲಪಂಥೀಯ ಕಾರ್ಯಕರ್ತ ಪುನಿತ್ ಕೆರೆಹಳ್ಳಿ ಬಂಧಿಸಲು ರಾಮನಗರ ಜಿಲ್ಲಾ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿದ್ದಾರೆ.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಕೇಂದ್ರ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಬಿ.ಆರ್. ರವಿಕಾಂತೇಗೌಡ, ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಫೋರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ತಂಡ ಮರಣೋತ್ತರ ಪರೀಕ್ಷೆಯನ್ನು ನಡೆಸಿದೆ ಮತ್ತು (ಪಾಶಾ) ಸಾವಿಗೆ ನಿಖರವಾದ ಕಾರಣ ತಿಳಿಯಲು ವರದಿಗಾಗಿ ಕಾಯುತ್ತಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ ಎಂದರು.

Also Read  RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ

error: Content is protected !!
Scroll to Top