ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಮಗಳನ್ನು ಶಾಲೆಗೆ ಬಿಡಲು ಬೈಕ್’ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಾಗಡಿಯ ಸಾಬರಪಾಳ್ಯದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮಾಗಡಿಯ ಕಲ್ಯಾ ಗ್ರಾಮದ ಯೋಗೇಶ್ (47) ಮಗಳು ಹರ್ಷಿತಾ(14) ಮೃತಪಟ್ಟವರು. ಪ್ರತಿನಿತ್ಯ ಶಾಲೆಗೆ ಬಿಡುತ್ತಿದ್ದಂತೆ ಮಗಳನ್ನು ಬೈಕ್’ನಲ್ಲಿ ಕೂರಿಸಿಕೊಂಡು ತಂದೆ ಶಾಲೆಯತ್ತ ಸಾಬರಪಾಳ್ಯದ ಮಾರ್ಗವಾಗಿ ಹೋಗುತ್ತಿದ್ದಾಗ ಜವರಾಯನಾಗಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Also Read  ಕೊನೆಗೂ ನನಸಾದ ಕಡಬದ ಜನತೆಯ ಬಹುಕಾಲದ ಕನಸು ► ನೂತನ ಕಡಬ ತಾಲೂಕಿಗೆ ಚಾಲನೆ ► ವೇದಿಕೆಯಲ್ಲಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು

 

error: Content is protected !!
Scroll to Top