ಮಂಗಳೂರು: ಬುದ್ಧಿಮಾಂದ್ಯೆಯ ಮೇಲೆ ಅತ್ಯಾಚಾರ ➤ 65 ವರ್ಷದ ವೃದ್ದನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.05. ಬುದ್ಧಿಮಾಂದ್ಯೆಯನ್ನು ಅತ್ಯಾಚಾರಗೈದ ಆರೋಪದಲ್ಲಿ 65 ವರ್ಷದ ವೃದ್ಧನ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 65 ವರ್ಷ ಪ್ರಾಯದ ರಾಜ್‌ ಭಟ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.


ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೂರಿಂಜೆ ಮೂಲದ ಆರೋಪಿ ರಾಜ್‌ಭಟ್ ಬ್ರೋಕರ್ ಕೆಲಸ ಮಾಡಿಕೊಂಡಿದ್ದು, ಆತನು ಮಂಗಳೂರು ಹೊರವಲಯದ ಸುರತ್ಕಲ್ ಪ್ರದೇಶದ ಬುದ್ಧಿಮಾಂದ್ಯೆಯನ್ನು ಆಕೆಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ವಿವಾಹಿತನಾಗಿದ್ದು, ಪತ್ನಿ ಮತ್ತು ಮಕ್ಕಳಿಂದ ದೂರವಾಗಿದ್ದಾನೆ ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group