ಕೆಲವರ ಪಕ್ಷಾಂತರದಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲವು ಶಾಸಕರು ಮತ್ತು ಎಂಎಲ್‌ಸಿಗಳ ಪಕ್ಷಾಂತರವು ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬ ಖಚಿತತೆಯ ಮೇರೆಗೆ ಕೆಲ ನಾಯಕರು ಪಕ್ಷ ತೊರೆದಿದ್ದು, ಇದರಿಂದ ಪಕ್ಷಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ. ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂದು ಪುನರುಚ್ಚರಿಸಿದರು.

Also Read 

 

error: Content is protected !!
Scroll to Top