ಜ.16 ರಿಂದ 21: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ ► ಇಂದು(ಜ.10) ಗೊನೆ ಮುಹೂರ್ತ

(ನ್ಯೂಸ್ ಕಡಬ) newskadaba.com ಸುಳ್ಯ, ಜ.10. ಇಲ್ಲಿನ ಶ್ರೀ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಜನವರಿ 16 ರಿಂದ 21 ರ ವರೆಗೆ ನಡೆಯಲಿದೆ.

ಜಾತ್ರಾ ಮಹೋತ್ಸವದ ಪ್ರಯುಕ್ತ ಜನವರಿ 10 ಬುಧವಾರ ಬೆಳಿಗ್ಗೆ 9.00 ಗಂಟೆಗೆ ಗೊನೆ ಮುಹೂರ್ತ ನಡೆಯಲಿದ್ದು, ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಆಡಳಿತ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!
Scroll to Top