‘ಉದ್ದಟತನದ ಪರಮಾವಧಿ’- ಮಹಾರಾಷ್ಟ್ರ ವಿರುದ್ಧ ಸಿಎಂ ಬೊಮ್ಮಾಯಿ ಗರಂ

(ನ್ಯೂಸ್ ಕಡಬ)newskadaba.com   ಬೆಂಗಳೂರು, ಏ.05. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂನಲ್ಲಿದ್ದರೂ ಮಹಾರಾಷ್ಟ್ರ ಸರ್ಕಾರ ಗಡಿಯಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ಧಟತನದ ಪರಮಾವಧಿಯಾಗಿದ್ದು ಇದು 2 ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನ. ಮಹಾರಾಷ್ಟ್ರ ಉದ್ಧಟತನ ಮುಂದುವರಿಸಿದರೆ ಕರ್ನಾಟಕ ಸರ್ಕಾರವೂ ಗಡಿ ಕನ್ನಡಿಗರ ರಕ್ಷಣೆಗೆ ವಿಮೆ ಜಾರಿಗೊಳಿಸಬೇಕಾಗುತ್ತದೆ ಎಂದಿದ್ದಾರೆ.

Also Read  ರಾಜ್ಯದ 1,695 ಅನಧಿಕೃತ ಶಾಲೆಗಳನ್ನು ಬಂದ್ ಮಾಡಲಾಗುವುದು - ಶಿಕ್ಷಣ ಸಚಿವ ಮಧು ಬಂಗಾರಪ್ಪ

error: Content is protected !!
Scroll to Top