ಸುಳ್ಯ ವಿಧಾನ ಸಭಾ ಕ್ಷೇತ್ರ ಸಹಿತ ದ. ಕ ಜಿಲ್ಲೆಗೆ ಆಗಮಿಸಿದ CRPF ಕಂಪನಿ

 (ನ್ಯೂಸ್ ಕಡಬ)newskadaba.com ಮಂಗಳೂರು, ಏ.05. ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 CRPF ಕಂಪನಿಗಳು ಆಗಮಿಸಿವೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಮಟೆ ವಿಕ್ರಮ ತಿಳಿಸಿದ್ದಾರೆ.

ಈ 4 CRPF ಕಂಪನಿಗಳನ್ನು ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಮುಂದೆ ಇನ್ನು ಹೆಚ್ಚು ಕಂಪನಿಗಳು ಚುನಾವಣೆ ಕರ್ತವ್ಯಕ್ಕೆ ಆಗಮಿಸಲಿವೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Also Read  ವಿಟ್ಲ: ದರೋಡೆ ಪ್ರಕರಣಕ್ಕೆ ಹೊಸ ಟ್ವಿಸ್ಟ್..! ➤➤ ಪ್ರಿಯಕರಣ ಕಾಟ ತಪ್ಪಿಸಲು ಮಹಿಳೆಯಿಂದ ಕಟ್ಟು ಕಥೆ...?

error: Content is protected !!
Scroll to Top