(ನ್ಯೂಸ್ ಕಡಬ)Newskadaba.com ರಾಮನಗರ,ಏ.05 ಇದ್ರೀಷ್ ಪಾಷಾ ಹತ್ಯೆ ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಆತನ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.
ತಲೆ ಮರೆಸಿಕೊಂಡಿದ್ದ ಪುನೀತ್ ಮತ್ತು ಆತನ ಸಹಚರರ ಬಂಧನಕ್ಕೆ 4 ತಂಡ ರಚಿಸಲಾಗಿತ್ತು. ಪೊಲೀಸರು ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದು ಅಲ್ಲಿಂದ ಕರೆತರಲಾಗುತ್ತಿದೆ ಎಂದು ತಿಳಿದು ಬಂದಿದೆ.