ಜಯಂತಿಗಳ ಪಟ್ಟಿಯಿಂದ ಅಂಬೇಡ್ಕರ್ ಜಯಂತಿ ಕೈಬಿಟ್ಟಿಲ್ಲ.!!   ➤ ಸಂಸ್ಕೃತಿ ಇಲಾಖೆ ಸ್ಪಷ್ಟನೆ  

(ನ್ಯೂಸ್ ಕಡಬ)Newskadaba.com ಬಂಗಳೂರು,ಏ.06 ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೈಬಿಟ್ಟಿದೆ ಎಂಬ ಸುದ್ದಿಯನ್ನು ಹರಿಯಬಿಡಲಾಗಿದ್ದು, ಈ ಸುದ್ದಿಯು ವಾಸ್ತವಾಂಶಕ್ಕೆ ದೂರವಾಗಿರುತ್ತದೆ.

ವಾಸ್ತವವಾಗಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ ರಾಂ ರವರ ಜಯಂತಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿವರ್ಷ ಆಚರಿಸಲಾಗುತ್ತಿದ್ದು, ಈ 2 ಜಯಂತಿಗಳ ಆಚರಣೆಗೆ ಸಂಬಂಧಿಸಿದ ವಿಷಯಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವುದಿಲ್ಲ ಎಂಬ ಅಂಶವನ್ನು ಈ ಮೂಲಕ ಸ್ಪಷ್ಟಪಡಿಸಲಾಗಿದೆ ಎಂದು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Also Read  ಮಡಿಕೇರಿ : ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿಗೆ ಚಾಕುವಿಂದ ಇರಿತ      

 

 

 

 

 

 

 

error: Content is protected !!
Scroll to Top