ಮಂಗಳೂರು: ದೆಹಲಿ ಮೂಲದ ಯುವತಿ ನಾಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಅಶೋಕನಗರ ಗೋಕುಲ ಕಲ್ಯಾಣ ಮಂಟಪ ಬಳಿಯ ನಿವಾಸಿ, ಮೂಲತಃ ನವದೆಹಲಿಯವರಾದ, 5 ವರ್ಷಗಳಿಂದ ನಗರದಲ್ಲಿರುವ ಬಂಧುಗಳ ಮನೆಯಲ್ಲಿ ನೆಲೆಸಿದ್ದ ದೀಕ್ಷಿತಾ ಅಲಿಯಾಸ್‌ ರಿಯಾ (20) ನಾಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಸಮಯ ಕಳೆಯುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಬುದ್ಧಿಮಾತು ಹೇಳಿದ್ದರು.

ಎತ್ತರ 5.1 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಮನೆಯಿಂದ ಹೋಗುವಾಗ ಹಳದಿ ನೀಲಿ ಮಿಶ್ರಿತ ಚೂಡಿದಾರ ಧರಿಸಿದ್ದು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಯುವತಿ ಕಂಡುಬಂದಲ್ಲಿ ಉರ್ವ ಪೊಲೀಸ್‌ ಠಾಣೆ ಅಥವಾ ಕಂಟ್ರೋಲ್‌ ರೂಮ್‌ ಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Also Read  ಪೋಸ್ಟ್ ಮ್ಯಾನ್ ಗೆ ಕೊರೋನಾ ನೆಗೆಟಿವ್ ➤ ಗಂಟಲ ದ್ರವ ಪರೀಕ್ಷೆ ವರದಿಯಲ್ಲಿ ದೃಢ

 

error: Content is protected !!
Scroll to Top