ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿಯವರ ಬಗ್ಗೆ ಅವಹೇಳನ ►ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಜ.10. ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಅವಹೇಳನಕಾರಿ ವಿಡಿಯೋವನ್ನು ಹರಿಬಿಟ್ಟ ಸಂಬಂಧ ಆರೋಪಿಯನ್ನು ನಗರಠಾಣೆ ಪೊಲೀಸರು ಬಂಧಿಸಿದ ಘಟನೆ ಮಂಗಳವಾರದಂದು ನಡೆದಿದೆ.

ಬಂಧಿತನನ್ನು ಚಿಕ್ಕಬಳ್ಳಾಪುರ ನಿವಾಸಿ ಯಾಸೀನ್ ಎಂದು ಗುರುತಿಸಲಾಗಿದೆ. ಈತ ಮೋದಿ ಹಾಗೂ ಯೋಗಿ ಅವರನ್ನು ಅವಹೇಳನ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಜನವರಿ 06 ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರ ಠಾಣೆಗೆ ದೂರು ನೀಡಲಾಗಿತ್ತು. ಈ ಬಗ್ಗೆ ಪರಿಶೀಲಿಸಿದ ಪೊಲೀಸರು ವಿಡಿಯೋದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

error: Content is protected !!
Scroll to Top