(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ವೇಳಾಪಟ್ಟಿ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಬಂಡೀಪುರದ ಹುಲಿ ಸಫಾರಿಯ ಬಳಿಕವೇ ಸಂಸದೀಯ ಮಂಡಳಿ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತಲಾ ಮೂವರು ಆಕಾಂಕ್ಷಿಗಳ ಹೆಸರನ್ನು ನಮೂದಿಸಲಾಗಿದೆ.