16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ.!!   ➤ಆರೋಪಿ ಬಂಧನ!

(ನ್ಯೂಸ್ ಕಡಬ)Newskadaba.com ನವದೆಹಲಿ, ಏ.06 ದರೋಡೆ ಮಾಡುವ ಉದ್ದೇಶದಿಂದ ನಿರ್ಮಾಣ ಹಂತದ ಕಟ್ಟಡದ ಆವರಣಕ್ಕೆ ಪ್ರವೇಶಿಸಿದ ಅಪ್ರಾಪ್ತ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಯವ್ಯ ದೆಹಲಿಯ ಅಶೋಕ್ ವಿಹಾರ್ ಪ್ರದೇಶದಲ್ಲಿ  ಈ ಘಟನೆ ನಡೆದಿದ್ದು, ಕೃತ್ಯ ನಡೆದಾಗ ಕಟ್ಟಡದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಬಾಲಕಿಯ ಪೋಷಕರು ಇರಲಿಲ್ಲ ಎಂದು  ತಿಳಿಸಿದ್ದಾರೆ.

ಆಕೆಯ ಪೋಷಕರು ನಿರ್ಮಾಣ ಹಂತದ ಕಟ್ಟಡದೊಳಗೆ ತಾತ್ಕಾಲಿಕ ಮನೆಯಲ್ಲಿ ವಾಸಿಸುತ್ತಿದ್ದರು ಮತ್ತು ಅವರು ತಮ್ಮ ವೇತನವನ್ನು ಸಂಗ್ರಹಿಸಲು ಹೋಗಿದ್ದರು. ಈ ಸಂದರ್ಭದ ಲಾಭ ಪಡೆದ ಆತ, ಇಬ್ಬರಿಗೂ ಚಾಕು ತೋರಿಸಿ ಹೆದರಿಸಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ಕಟ್ಟಡದ ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Also Read  ಅ.05: ಬಿಜೆಪಿ ಎಸ್ಸಿ ಮೋರ್ಛಾ ವತಿಯಿಂದ ಬೃಹತ್ ಸಮರ್ಥನಾ ಸಮಾವೇಶ ► ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿ ಸಭೆ

 

 

 

error: Content is protected !!
Scroll to Top