ಎತ್ತಿನ ಗಾಡಿಗೆ ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಬಾಲಕರ ಮೃತ್ಯು

(ನ್ಯೂಸ್ ಕಡಬ)newskadaba.com ಚಳ್ಳಕೆರೆ, ಏ.07. ಚಳ್ಳಕೆರೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಎತ್ತಿನ ಗಾಡಿಗೆ ಬೈಕ್ ಢಿಕ್ಕಿಯಾಗಿ ಇಬ್ಬರು ಬಾಲಕರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.


SSLC ಓದುತ್ತಿದ್ದ ಇಬ್ಬರು ಬಾಲಕರು ಪಟಾಕಿ ತರಲೆಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಎದುರುಗಡೆ ಬರುತ್ತಿದ್ದ ಎತ್ತಿನ ಗಾಡಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

 

Scroll to Top