ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ ➤ 14 ದಿನಗಳ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ಕೇರಳ, ಏ.07. ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.


ಆರೋಪಿ ಶಾರುಖ್‌ ಸೈಫಿ(24) ಗಾಯಗೊಂಡಿರುವುದರಿಂದ ಆತನನ್ನು ಮಹಾರಾಷ್ಟ್ರದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಪಿ ಶಾರುಖ್‌ ಸೈಫಿಯನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ಅವರು ಆಸ್ಪತ್ರೆಗೆ ಆಗಮಿಸಿ ಮತ್ತು ಸೈಫಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

Scroll to Top