ವಾಹನಗಳ ಮೇಲೆ ರಾಜಕೀಯ ಪಕ್ಷಗಳ ಫೋಟೋ ಹಾಕಿದ್ರೆ ಕೇಸ್..!

(ನ್ಯೂಸ್ ಕಡಬ)newskadaba.com ಮಡಿಕೇರಿ, ಏ.07. ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ, ಬಸ್ ಹಾಗೂ ಇತರೆ ಯಾವುದೇ ವಾಹನಗಳ ಮೇಲೆ, ಯಾವುದೇ ರಾಜಕೀಯ ವ್ಯಕ್ತಿಗಳ ಭಾವಚಿತ್ರ, ಬ್ಯಾನರ್ ಅಳವಡಿಸುವುದನ್ನು ನಿಷೇಧಗೊಳಿಸಲಾಗಿದೆ.

ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ, ಬಸ್ ಹಾಗೂ ಇತರೆ ಯಾವುದೇ ವಾಹನಗಳ ಮೇಲೆ, ಯಾವುದೇ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಅಥವಾ ಪಕ್ಷಗಳನ್ನು ಬಿಂಬಿಸುವ ಬ್ಯಾನರ್ಸ್, ಬಿತ್ತಿಪತ್ರಗಳು ಹಾಗೂ ಇತರೇ ಚಿತ್ರಗಳನ್ನು ಪೂರ್ವಾನುಮತಿ ಇಲ್ಲದೆ ಪ್ರದರ್ಶಿಸುವಂತಿಲ್ಲ ಹಾಗೂ ಪ್ರದರ್ಶನದ ಬ್ಯಾನರ್ಸ್/ ಕಟೌಟ್ಸ್ ಇತರೆ ಚಿತ್ರಗಳನ್ನು 24 ಗಂಟೆಗಳ ಒಳಗಾಗಿ ಕಡ್ಡಾಯವಾಗಿ ತೆರವುಗೊಳಿಸುವುದು.

Also Read  ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ

 

error: Content is protected !!
Scroll to Top