ಮಂಗಳೂರು: 3 ಶೂಟೌಟ್‌ ಪ್ರಕರಣಗಳಲ್ಲಿ ಬನ್ನಂಜೆರಾಜ ಖುಲಾಸೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.08. ಬನ್ನಂಜೆರಾಜನ ವಿರುದ್ದ ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ ಎಂದು ವರದಿ ತಿಳಿಸಿದೆ.

ಇತನ ವಿರುದ್ದ ಪಾಂಡೇಶ್ವರ ಪೊಲೀಸ್‌ ಠಾಣೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮೂರೂ ಪ್ರಕರಣಗಳಲ್ಲಿ ಪೊಲೀಸರು ತನಿಖೆ ನಡೆಸಿ ಬನ್ನಂಜೆರಾಜ ಮತ್ತು ಆತನ ಸಹಚರರ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಘಟನೆಗಳ ವೇಳೆಯಲ್ಲಿ ಬನ್ನಂಜೆರಾಜ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

Also Read  ಮರ್ಧಾಳ: ಕ್ಯಾನ್ಸರ್ ಗೆ ತುತ್ತಾಗಿದ್ದ ಬಾಲಕ ವಿಧಿವಶ

 

error: Content is protected !!
Scroll to Top