ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತ್ಯು

Death, deadbody, Waterfall

(ನ್ಯೂಸ್ ಕಡಬ)newskadaba.com ವಿಜಯಪುರ, ಏ.08. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ನಡೆದಿದೆ.

ಪವಾಡ ಬಸವೇಶ್ವರ ಜಾತ್ರೆ ಅಂಗವಾಗಿ ರಥೋತ್ಸವ ಹಮ್ಮಿಕೊಳ್ಳಲಾಗಿದ್ದು,ಈ ವೇಳೆ ರಥೋತ್ಸವ ನಡೆಯುತ್ತಿದ್ದ ವೇಳೆ ಚಕ್ರಕ್ಕೆ ಸಿಲುಕಿ ಯುವಕ ಬಸವರಾಜ್ ಸಾವಿಗೀಡಾಗಿದ್ದಾನೆ.

ಬಸವರಾಜ್‍ಗೆ ಗಂಭೀರ ಗಾಯಗಳಾಗಿದ್ದು, ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಬಸವರಾಜ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದ್ದಾರೆ. ಬಸವರಾಜ್ ಎರಡೂ ಕಾಲುಗಳ ಮೇಲೆ ರಥದ ಕಲ್ಲಿನ ಚಕ್ರಗಳು ಹಾದಿದ್ದು, ಕಾರಣ ತೀವ್ರವಾಗಿ ಬಸವರಾಜ್ ಗಾಯಗೊಂಡಿದ್ದ ಎನ್ನಲಾಗಿದೆ.

Also Read 

 

 

error: Content is protected !!
Scroll to Top