ಪ್ರಧಾನಿ ಮೋದಿ, ಮುಖ್ಯಮಂತ್ರಿ ಯೋಗಿಗೆ ಬೆದರಿಕೆ ಆರೋಪ ➤ 16 ವರ್ಷದ ಬಾಲಕನ ಬಂಧನ

(ನ್ಯೂಸ್ ಕಡಬ)newskadaba.com ನೋಯ್ಡಾ, ಏ.08. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದಲ್ಲಿ ಲಕ್ನೋದ 16 ವರ್ಷದ ಬಾಲಕನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.

ಮೋದಿ ಹಾಗೂ ಯೋಗಿಯನ್ನು ಮುಗಿಸುವುದಾಗಿ ಮಾಧ್ಯಮ ಸಂಸ್ಥೆಗೆ ಇಮೇಲ್ ಕಳುಹಿಸಿದ ಬಾಲಕನ ವಿರುದ್ಧ ಏಪ್ರಿಲ್ 5 ರಂದು ನೊಯ್ಡಾದ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಈ ವಿಷಯವನ್ನು ತನಿಖೆ ಮಾಡಲಾಯಿತು ಎಂದು ಸಹಾಯಕ ಪೊಲೀಸ್ ಆಯುಕ್ತ (ನೋಯ್ಡಾ) ರಜನೀಶ್ ವರ್ಮಾ ಹೇಳಿದರು.

Also Read  ಆಕಸ್ಮಿಕವಾಗಿ ಹಾರಿದ ಕ್ಷಿಪಣಿಗಳು..!    ➤  ಭಾರೀ ಸ್ಪೋಟ  

error: Content is protected !!
Scroll to Top