(ನ್ಯೂಸ್ ಕಡಬ)newskadaba.com ಮಂಗಳೂರು, ಏ.08. ಸಾಮಾಜಿಕ ಜಾಲತಾಣಗಳ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಕಣ್ಣಿಟ್ಟಿದ್ದು, ಕಾನೂನುಬಾಹಿರ ಪೋಸ್ಟ್ ಗಳನ್ನು ಪ್ರಸಾರ ಮಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ವಿಕ್ರಂ ಅಮ್ಟೆ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಬರವಣಿಗೆ, ಚಿತ್ರ, ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಇತ್ಯಾದಿ ಪೋಸ್ಟ್ ಗಳನ್ನು ಹಾಕುವ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾ ಪೊಲೀಸರು, ಪುತ್ತೂರು ಮತ್ತು ಬಂಟ್ವಾಳ ಪೊಲೀಸ್ ಕಚೇರಿಗಳಲ್ಲಿ ಸಾಮಾಜಿಕ ಜಾಲತಾಣ ನಿಗಾ ಘಟಕವು ವಿಶೇಷವಾಗಿ ಗಮನಹರಿಸುತ್ತಿದೆ ಎಂದು ಎಸ್ಪಿ ಹೇಳಿದ್ದಾರೆ.