ರಾಜ್ಯದ 20 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಮಳೆ ➤ ಹವಾಮಾನ ಇಲಾಖೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ. 08. ರಾಜ್ಯದ 20 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾವೇರಿ, ಕೊಪ್ಪಳ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆಯಾಯ ಜಿಲ್ಲಾಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ ಎಂದು ಹೇಳಿದೆ.

 

Scroll to Top