ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಉರುಳಿದ‌ ಕಾರು ➤ ಮಹಿಳೆ‌ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಎ.10. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.

ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸರೋಜಿನಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ, ಪೂರ್ಣಿಮಾ ಶೆಟ್ಟಿ, ಸಮೃದ್ಧ್, ಸಾಕ್ಷಿ, ಕಾರು ಚಾಲಕ ಅರುಣ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ತಿರುಪತಿ ದೇವಾಲಯದ ಬಾಯ್ಲರ್ ನಿಂದ ಬಿಸಿನೀರು ಸೋರಿಕೆ ➤ ಐವರಿಗೆ ಗಾಯ, ಇಬ್ಬರಿಗೆ ಗಂಭೀರ

 

error: Content is protected !!
Scroll to Top